ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಯಚೂರು, 30 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವ
ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ರಾಯಚೂರು, 30 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 2 ಕೊನೆಯ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ 3.50 ಲಕ್ಷ ರು.ಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ 98 ಸಾವಿರ ರು. ಮತ್ತು ನಗರ ಪ್ರದೇಶದವರಿಗೆ 1.20 ರು. ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇದೆ.

ನಿಗಮದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ). ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು 15 ಲಕ್ಷ ರು. ಗಳ ಮಿತಿಯಲ್ಲಿರಬೇಕು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನುwww.kaushalkar.com ನಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೆÇೀರ್ಟಲ್ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್: : https://kvcdcl.karnataka.gov.in . ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ: 080-22374848, 7899899039ಗೆ ಸಂಪರ್ಕ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಂ: 1-1-158, ಉದಯನಗರ, ಕರ್ನಾಟಕ ಗ್ರಾಮೀಣ ಬ್ಯಾಂಕ ಹಿಂಭಾಗ, ಉಮಾ ಹೋಟೆಲ್ ಹತ್ತಿರ, ಸ್ಟೇಶನ ರೋಡ್, ರಾಯಚೂರು ದೂರವಾಣಿ ಸಂಖ್ಯೆ: 08532-250440ಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande