ಬೆಂಗಳೂರು, 04 ಜೂನ್ (ಹಿ.ಸ.) :
ಆ್ಯಂಕರ್ : ಐಪಿಎಲ್ ನಲ್ಲಿ ಆರ್ ಸಿಬಿಯ ಚೊಚ್ಚಲ ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸೇರಿ ಸಚಿವರುಗಳು ಐಪಿಎಲ್ ಚಾಂಪಿಯನ್ ಆರ್ ಸಿಬಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು. ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆ, ಎಕ್ಸ್ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಐತಿಹಾಸಿಕ ಐಪಿಎಲ್ ಗೆಲುವಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆಗಳು. ಅಂತಿಮವಾಗಿ ಕನಸು ನನಸಾಗಿದೆ. ಈ ಸಲ ಕಪ್ ನಮ್ಮದೇ. ಈ ಗೆಲುವು ಕರ್ನಾಟಕ ಹಾಗೂ ವಿಶ್ವದಾದ್ಯಂತದ ಅಭಿಮಾನಿಗಳ ಹೆಮ್ಮೆಯನ್ನು ಇಮ್ಮಡಿಗೊಳಿಸಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa