ರಂಗ ಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
ಗದಗ, 04 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ್ ರಂಗಪ್ರಯೋಗಶಾಲೆಯ 2025-26 ನೇ ಸಾಲಿನ ರಂಗಶಿಕ್ಷಣಕ್ಕೆ ( ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ ) ಗೆ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್ ಎಸ
ಪೋಟೋ


ಗದಗ, 04 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ್ ರಂಗಪ್ರಯೋಗಶಾಲೆಯ 2025-26 ನೇ ಸಾಲಿನ ರಂಗಶಿಕ್ಷಣಕ್ಕೆ ( ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ ) ಗೆ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಕೊಡಲಾಗಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ.

ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ , ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗ ಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ದಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿಗಾಗಿ ರಂಗಶಾಲೆಯ ವೆಬ್‌ಸೈಟ್ ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಜೂನ್ 25 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಸಂದರ್ಶನವನ್ನು ಜೂನ್ 27-28 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ , ಸಾಣೇಹಳ್ಳಿ- 577515, ಹೊಸದುರ್ಗ – ತಾ, ಚಿತ್ರದುರ್ಗ ಜಿಲ್ಲೆ ದೂರವಾಣಿ ಸಂಖ್ಯೆ 9448398144-8861043553 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande