ಗುವಾಹಟಿ, 04 ಜೂನ್ (ಹಿ.ಸ.) :
ಆ್ಯಂಕರ್ : ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರಿಸಿದ್ದು, ರಾಜ್ಯದ 21 ಜಿಲ್ಲೆಗಳ 6.33 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ಥರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸಂಭವಿಸಿದ ದುರಂತದಲ್ಲಿ ಆರು ಜನ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಮಳೆಯಿಂದ ಸಂಭವಿಸಿದ ದುರ್ಘಟನೆಗಳಿಂದ ಮೃತರ ಸಂಖ್ಯೆ 12ಕ್ಕೆ ಏರಿದೆ. ಇನ್ನು ಕ್ಯಾಚರ್ ಜಿಲ್ಲೆಯಲ್ಲಿ ಒರ್ಓ ವ್ಯಕ್ತಿ ಕಾಣೆಯಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ನಿರಂತರ ಮಳೆ ಮತ್ತು ನದಿಗಳ ನೀರಿನ ಮಟ್ಟ ಏರಿಕೆಯಿಂದ ಉಂಟಾದ ವ್ಯಾಪಕ ಪ್ರವಾಹದಿಂದ 1,506 ಹಳ್ಳಿಗಳು ಹಾಗೂ 14,700 ಹೆಕ್ಟೇರ್ಗೂ ಹೆಚ್ಚು ಕೃಷಿ ಭೂಮಿ ಮುಳುಗಡೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa