ಬಳ್ಳಾರಿ, 04 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಉಪ-ವಿಭಾಗದ ಜೆಸ್ಕಾಂ ವ್ಯಾಪ್ತಿಗೆ ಬರುವ 33/11ಕೆ.ವಿ ಎರ್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಹಮ್ಮಿಕೊಳ್ಳುತ್ತಿರುವುದರಿಂದ ಜೂನ್ 06 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-01 ಡಿ.ಎನ್.ಹಳ್ಳಿ ಎನ್.ಜೆ.ವೈ ಮಾರ್ಗದ ಡಿಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್ ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು. ಎಫ್-03 ಹಳೆ ಯರ್ರಗುಡಿ ಐಪಿ ಮಾರ್ಗದ ಹಳೆ ಯರ್ರಗುಡಿ, ಹೊಸ ಯರ್ರಗುಡಿ, ಸಿಂಧುವಾಳ, ಬೆಣಕಲ್ಲು ಕೃಷಿ ಪ್ರದೇಶಗಳು.
ಎಫ್-05 ಸಿಂಧುವಾಳ, ಸೋಲಾರ್ ಮಾರ್ಗ, ಹಳೆ ಯರ್ರಗುಡಿ, ಹೊಸ ಯರ್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು. ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಕೃಷಿ ಪ್ರದೇಶಗಳು ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್