ದ್ವಿತೀಯ ಪಿ.ಯು.ಸಿ. ಪರೀಕ್ಷೆ -3 : ಪ್ರತಿಬಂಧಕಾಜ್ಞೆ ಜಾರಿ
ಗದಗ, 04 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025 ರ ಜೂನ್ ತಿಂಗಳಲ್ಲಿ ಜರುಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ -3 ಪರೀಕ್ಷೆಗಳನ್ನು ಜೂನ್ 9 ರಿಂದ 20 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು
ಪೋಟೋ


ಗದಗ, 04 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025 ರ ಜೂನ್ ತಿಂಗಳಲ್ಲಿ ಜರುಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ -3 ಪರೀಕ್ಷೆಗಳನ್ನು ಜೂನ್ 9 ರಿಂದ 20 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮಿಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮಿಟರ್ ಪರಿಮಿತಿಯೊಳಗೆ ಜೂನ್ 9 ರಿಂದ 20 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂಇದರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ/ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು / ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಪ್ರತಿಬಂಧಿಸಿದ ಯಾವುದೇ ವಸ್ತುಗಳನ್ನು ಸಂಬAಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ತೆಗೆದುಕೊಂಡು ಹೋಗುವುದನ್ನುನಿರ್ಬಂಧಿಸಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande