ನವದೆಹಲಿ, 04 ಜೂನ್ (ಹಿ.ಸ.) :
ಆ್ಯಂಕರ್ : 2024ರಲ್ಲಿ ಸುಮಾರು 3.37 ಲಕ್ಷ ಭಾರತೀಯ ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ಅಮೆರಿಕಕ್ಕೆ ತೆರಳಿದ್ದು, ಅದು ಅಮೆರಿಕದ ವಿದೇಶಿ ವಿದ್ಯಾರ್ಥಿಗಳಲ್ಲಿ ಮೂರನೇ ಒಂದು ಭಾಗವಾಗಿದೆ. ಈ ವಿದ್ಯಾರ್ಥಿಗಳ ಭವಿಷ್ಯವು ಅಧ್ಯಕ್ಷ ಟ್ರಂಪ್ ಅವರ ನೂತನ ನಿಲುವಿನಿಂದಾಗಿ ಅನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ಜಯರಾಮ್ ರಮೇಶ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು,
ಭಾರತೀಯ ಕುಟುಂಬಗಳು ಮಕ್ಕಳ ಶಿಕ್ಷಣಕ್ಕಾಗಿ ಉಳಿತಾಯ ಅಥವಾ ಸಾಲವನ್ನು ಬಳಸಿದ್ದು, ಈಗ ಆ ಕುಟುಂಬಗಳು ಆತಂಕಕ್ಕೆ ಗುರಿಯಾಗಿವೆ. ಟ್ರಂಪ್ ಅವರು ಚೀನಾದ ವಿದ್ಯಾರ್ಥಿಗಳ ಕುರಿತು ಸ್ಪಷ್ಟ ನಿಲುವು ಪ್ರಕಟಿಸಿದರೆ, ಭಾರತದ ಪ್ರಧಾನಮಂತ್ರಿ ಹಾಗೂ ವಿದೇಶಾಂಗ ಸಚಿವರು ಮೌನವಿರುವುದನ್ನು ಅವರು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa