ಝಬುವಾ, 04 ಜೂನ್ (ಹಿ.ಸ.) :
ಆ್ಯಂಕರ್ : ಮಧ್ಯ ಪ್ರದೇಶದ ಝಬುವಾ ಜಿಲ್ಲೆಯ ಭಾವಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ ಟ್ರಾಲಿಯೊಂದು ನಿಯಂತ್ರಣ ತಪ್ಪಿ ಓಮ್ನಿ ವ್ಯಾನ್ ಮೇಲೆ ಉರುಳಿದ ಪರಿಣಾಮ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 4 ಮಕ್ಕಳು, 3 ಮಹಿಳೆಯರು ಮತ್ತು 2 ಪುರುಷರು ಸೇರಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೇಘನಗರದ ಶಿವಗಢ ಮಹುಡಾದ ಎರಡು ಕುಟುಂಬಗಳು ಮದುವೆ ಸಮಾರಂಭ ಮುಗಿಸಿಕೊಂಡು ಗ್ರಾಮಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಟ್ರಾಲಿ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa