ಸವಿತಾ ಸಮಾಜ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕೊಪ್ಪಳ, 4 ಜೂನ್ (ಹಿ.ಸ.) ಆ್ಯಂಕರ್: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಗದಿಂದ 2025-26ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸವಿತಾ ಸಮಾಜ
ಸವಿತಾ ಸಮಾಜ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ


ಕೊಪ್ಪಳ, 4 ಜೂನ್ (ಹಿ.ಸ.)

ಆ್ಯಂಕರ್: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಗದಿಂದ 2025-26ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ(http://www.kaushalkar.com ) ಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಜೂನ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಯನ್ನು ಒಳಗೊಂಡಂತೆ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ನಿಗಮದ ವೆಬ್‍ಸೈಟ್ www.kssd.karnataka.gov.in ಗೆ ಭೇಟಿ ನೀಡಿ ಅರ್ಹತೆ, ಮಾನದಂಡಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂ: 080-22374832, 8050770004, 8050770005 ಮತ್ತು ಜಿಲ್ಲಾ ಕಚೇರಿಯ ದೂ.ಸಂ. 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande