ಬೆಂಗಳೂರು ದುರಂತಕ್ಕೆ ರಾಜ್ಯ ಸರಕಾರ ನೇರ ಹೊಣೆ:ಕುಮಾರಸ್ವಾಮಿ
ನವದೆಹಲಿ, 4 ಜೂನ್ (ಹಿ.ಸ.): ಆ್ಯಂಕರ್:ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರ
ಬೆಂಗಳೂರು ದುರಂತಕ್ಕೆ ರಾಜ್ಯ ಸರಕಾರ ನೇರ ಹೊಣೆ:ಕುಮಾರಸ್ವಾಮಿ


ನವದೆಹಲಿ, 4 ಜೂನ್ (ಹಿ.ಸ.):

ಆ್ಯಂಕರ್:ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು,

ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande