ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ತಂಬಾಕು ವ್ಯಸನಿಗಳಿಗೆ ಚಿಕಿತ್ಸೆ
ರಾಯಚೂರು, 4 ಜೂನ್ (ಹಿ.ಸ.) ಆ್ಯಂಕರ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಿಮ್ಸ್ ಬೋಧಕ ಆಸ್ಪತ್ರೆ ಸಹಯೋಗದಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ವಿಶ್ವ ತಂಬಾಕು ರಹಿತ ದಿನಾಚರಣೆ ನಡೆಯಿತು. ಇದೆ ವೇಳೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿನ ವ್ಯಸನಿಗಳಿಗೆ ಚಿಕಿತ್ಸೆ ನೀಡಲಾಯ
ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ತಂಬಾಕು ವ್ಯಸನಿಗಳಿಗೆ ಚಿಕಿತ್ಸೆ


ರಾಯಚೂರು, 4 ಜೂನ್ (ಹಿ.ಸ.)

ಆ್ಯಂಕರ್:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಿಮ್ಸ್ ಬೋಧಕ ಆಸ್ಪತ್ರೆ ಸಹಯೋಗದಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ವಿಶ್ವ ತಂಬಾಕು ರಹಿತ ದಿನಾಚರಣೆ ನಡೆಯಿತು.

ಇದೆ ವೇಳೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿನ ವ್ಯಸನಿಗಳಿಗೆ ಚಿಕಿತ್ಸೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಾಡು ಮತ್ತು ಕಿರು ನಾಟಕ ಮೂಲಕ ಅರಿವು ಮೂಡಿಸಲಾಯಿತು.

ಏಪ್ರಿಲ್ 2024 ರಿಂದ ಮಾರ್ಚ್ 2025ರವರೆಗೆ ಒಟ್ಟು 8,699 ತಂಬಾಕು ಆಪ್ತ ಸಮಾಲೋಚನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 104 ಜನರು ತಂಬಾಕು ತ್ಯಜಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿ ಅರಿವು ಮೂಡಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸರಾದ ಡಾ. ವಿಜಯಶಂಕರ್, ರಿಮ್ಸ್ ಪ್ರಭಾರಿ ಡೀನ್ ಅರವಿಂದ್ ಸಂಗಾವಿ, ರಿಮ್ಸ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜ್ ಎಂ ಪಾಟೀಲ್, ಆರ್.ಎಮ್.ಒ ಡಾ. ಶಾಮಣ್ಣ, ಮಾನಸಿಕ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ, ರಾಷ್ಟ್ರೀಯ ತಂಬಾಕು ನಿಯಂತ್ರಣದ ಜಿಲ್ಲಾ ಸಂಯೋಜಕರಾದ ಪ್ರಿಯಾಂಕಾ ರೇವಣ್ಣಕರ್ ಇತರೆ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ್, ಡಾ.ಅಮರೇಶ್ ಪಾಟೀಲ್, ಡಾ.ವಿನ್ಯಾಸ್ ಕುಮಾರ್ ಸೇರಿದಂತೆ ಎನ್.ಸಿ.ಡಿ ಸಿಬ್ಬಂದಿ ಹಾಗೂ ಎನ್.ಟಿ.ಸಿ.ಪಿ ಸಿಬ್ಬಂದಿ, ರಾಯಚೂರು ವಿಶ್ವವಿದ್ಯಾಲಯದ ಸಮಾಜ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande