ಧಾರವಾಡ, 4 ಜೂನ್ (ಹಿ.ಸ.):
ಆ್ಯಂಕರ್:ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅರಣ್ಯ ಇಲಾಖೆ ಮತ್ತು ಧಾರವಾಡ ವಕೀಲರ ಸಂಘದವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಜೂನ್ 5, 2025 ರಂದು ಬೆಳಿಗ್ಗೆ 9:45 ಗಂಟೆಗೆ ಧಾರವಾಡ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಲಾಗಿದೆ.
1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜಕುಮಾರ ಸಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ಪೀಠಾಧ್ಯಕ್ಷರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಸುವಣಾ ಕೆ.ಮಿರ್ಜಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ನಾಗರಾಜಪ್ಪ ಎ.ಕೆ., 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪೂರ್ಣಿಮಾ ಭಂಡಾರಕರ, 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಜರೀನಾ, ಉಪ ಧಾರವಾಡ ಪ್ರಾಧೇಶಿಕ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ವಕೀಲರ ಸಂಘದ ಅಧ್ಯಕ್ಷ ಅಶೋಕ. ವ್ಹಿ. ಏಣಗಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa