ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ’
ಬಳ್ಳಾರಿ, 05 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಜಿಲ್ಲಾ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಕಡೆಗೆ” ಎಂಬ ಘೋಷವಾಕ್ಯದೊಂದಿಗೆ ಗುರುವಾರ ನಗರ
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ’


ಬಳ್ಳಾರಿ, 05 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಜಿಲ್ಲಾ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಕಡೆಗೆ” ಎಂಬ ಘೋಷವಾಕ್ಯದೊಂದಿಗೆ ಗುರುವಾರ ನಗರದ ತಾಳೂರು ರಸ್ತೆಯಲ್ಲಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಆಚರಿಸಲಾಯಿತು.

ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರುಗಳು ಆವರಣದಲ್ಲಿ ಗಿಡಗಳನ್ನು ನೆಟ್ಟು ನೀರುಣಿಸುವ ಮೂಲಕ ಗಿಡ ನೆಟ್ಟು ಪೋಷಿಸೋಣ ಎಂಬ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಡಿ.ಪಿ ಕುಮಾರಸ್ವಾಮಿ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿದ್ಧಲಿಂಗಯ್ಯ ಗಂಗಾಧರಮಠ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ವಿನುತಾ.ಬಿ.ಎಸ್., 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್, ಅರಣ್ಯ ಇಲಾಖೆಯ ಅಧಿಕಾರಿ ದಾಸನಗೌಡ ಬಿ.ಪಾಟೀಲ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande