ಕೊಪ್ಪಳ, 05 ಜೂನ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣದೋಷ/ದೃಷ್ಟಿದೋಷ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/- ಗಳ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಗುತ್ತಿದ್ದು, ವಿಕಲಚೇತನರ ಆರೈಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್ ಖಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಯು.ಡಿ.ಐ.ಡಿ. ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, 2 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ನೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೊಪ್ಪಳ ಇವರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಶೇ.75 ರಷ್ಟು ಮತ್ತು ಅದಕ್ಕಿಂತ ಮೇಲ್ಪಟ್ಟ, ತೀವ್ರತೆರನಾದ ವಿಕಲತೆ ಹೊಂದಿದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲೂಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್