ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಕೊಪ್ಪಳ, 05 ಜೂನ್ (ಹಿ.ಸ.) : ಆ್ಯಂಕರ್ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಪ್ರವರ್ಗ-1ರ 6(ಎ) ಇಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ


ಕೊಪ್ಪಳ, 05 ಜೂನ್ (ಹಿ.ಸ.) :

ಆ್ಯಂಕರ್ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಪ್ರವರ್ಗ-1ರ 6(ಎ) ಇಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸ ವಿದ್ಯಾರ್ಥಿಗಳು ಮತ್ತು ನವೀಕರಣ ಒಳಗೊಂಡಂತೆ ಈ ಯೋಜನೆಗೆ ಕೊನೆಯ ದಿನಾಂಕವಿರುವುದಿಲ್ಲ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು(ಹೊಸ ವಿದ್ಯಾರ್ಥಿಗಳು), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಜುಲೈ 04 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಯನ್ನು ಒಳಗೊಂಡಂತೆ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

2023-24, 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ನಿಗಮದ ವೆಬ್‍ಸೈಟ್ https://ambigaradevelopment.karnataka.gov.in ಗೆ ಭೇಟಿ ನೀಡಿ ಅರ್ಹತೆ, ಮಾನದಂಡಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂ: 080-22864099 ಮತ್ತು ಜಿಲ್ಲಾ ಕಚೇರಿಯ ದೂ.ಸಂ. 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

:

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande