ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಕೊಪ್ಪಳ, 05 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷ
ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ


ಕೊಪ್ಪಳ, 05 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು, ಈ ಯೋಜನೆಗೆ ಕೊನೆಯ ದಿನಾಂಕವಿರುವುದಿಲ್ಲ), ಗಂಗಾ ಕಲ್ಯಾಣ ಯೋಜನೆ (ದಕ್ಷಿಣ ಕನ್ನಡ, ಉಡುಪಿ, ಕೊಡಗು. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಯಡಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರ ಮತ್ತು ಅಟಲ್ ಜಿ ಜನಸ್ನೇಹ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಜುಲೈ 02 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಯನ್ನು ಒಳಗೊಂಡಂತೆ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಒಂದು ಕುಟುಂಬದ ಒಬ್ಬರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24, 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಬೇರೆ ಯೋಜನೆಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಹತೆ, ಮಾನದಂಡಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿ ದೂ.ಸಂ : 080-22374848/7899899039 ಮತ್ತು ಜಿಲ್ಲಾ ಕಚೇರಿಯ ದೂ.ಸಂ. 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande