ಕೊಪ್ಪಳ, 05 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 10 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್