ಕೊಪ್ಪಳ, 05 ಜೂನ್ (ಹಿ.ಸ.) :
ಆ್ಯಂಕರ್ : ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಮಾನವನಿಂದಲೇ ಸರಿಯಾಗಬೇಕಿದೆ ನಾವು ಬದುಕುವ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಬಿ.ಕೆ. ರವಿ ತಿಳಿಸಿದ್ದಾರೆ.
ಅವರು ಗುರುವಾರ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ವಿಶ್ವ ಪರಿಸರ ದಿನದ ಥೀಮ್ ಆಗಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮತ್ತು ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಪರಿಸರ ರಕ್ಷಣೆಗೆ ಮೊದಲ ಹೆಜ್ಜೆ. ಬಳಕೆಯನ್ನು ಕಡಿಮೆ ಮಾಡುವ ಶಪಥ ಮಾಡುವ ಮೂಲಕ ಈ ದಿನವನ್ನು ಆಚರಣೆ ಮಾಡೋಣ, ಪ್ಲಾಸ್ಟಿಕ್ ಬಳಕೆಯನ್ನು ತಗ್ಗಿಸಿದರೆ ಭವಿಷ್ಯದ ಪೀಳಿಗೆಗೆ ಪರಿಸರ ಉಳಿಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೋ.ಕೆ.ವಿ.ಪ್ರಸಾದ್, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್.ಛತ್ರದ, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್