ಗದಗ, 05 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು- ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ನಿಗಮದ ವೆಬ್ಸೈಟ್ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಜಿಲ್ಲಾ ಕಚೇರಿ ದೂರವಾಣಿ 08372-232327 ಸಂಖ್ಯೆಗಳನ್ನು ಸಂಪರ್ಕಿಸಬಹುದು. ಸೇವಾ ಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ.
ಹಿಂದೂಸ್ತಾನ್ ಸಮಾಚಾರ್ / Lalita MP