ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ನಿಮ್ಮ ಕೈ ಕೆಳಗೆ ಕೆಲಸ ಮಾಡುವ, ನಿಮಗೆ ರಿಪೋರ್ಟ್ ಮಾಡಿಕೊಳ್ಳುವ ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಘಟನೆ ಕುರಿತು ಸರಕಾರದ ವಿರುದ್ದ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾರ್ಯಕ್ರಮದ ಬಗ್ಗೆ ಯೋಚನೆ ಮಾಡಿ, ಅದರ ರೂಪುರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿಗಳೇ ಸರ್ಕಾರದ ತಪ್ಪುಗಳು, ಲೋಪದೋಷಗಳು, ಎಡವಟ್ಟುಗಳು ಬಗ್ಗೆ ಪ್ರಾಮಾಣಿಕವಾಗಿ ತನಿಖೆ ಮಾಡಿ ವರದಿ ನೀಡುತ್ತಾರೆ ಅಂದರೆ ಅದನ್ನು ನಂಬಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಜನಸಾಮಾನ್ಯರಿಗೆ ವಂಚನೆ ಮಾಡಿ ಹೆಣಗಳನ್ನ ಉರುಳಿಸಿದ್ದಾಯ್ತು, ಈಗ ನಿಮಗೆ ನೀವೇ ಆತ್ಮ ವಂಚನೆ ಮಾಡಿಕೊಂಡು ಇನ್ನೊಂದು ಪಾಪ ಯಾಕೆ ಕಟ್ಟಿಕೊಳ್ಳುತ್ತೀರಿ?
ನ್ಯಾಯಾಂಗ ತನಿಖೆಯಿಂದ ಮಾತ್ರ ಅಮಾಯಕ ಜೀವಗಳಿಗೆ, ಅವರ ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ನಿಮ್ಮ ಸಣ್ಣತನ ಪ್ರದರ್ಶನ ಮಾಡುವ ದುಸ್ಸಾಹಸ ಮಾಡಬೇಡಿ ಎಂದು ಅಶೋಕ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa