ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ
ನವದೆಹಲಿ, 05 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 564 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,866 ಕ್ಕೆ ತಲುಪಿದೆ. ಈ ಅವಧಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರಲ್ಲಿ 3 ಮಂದಿ ಮಹಾರಾಷ
Covid


ನವದೆಹಲಿ, 05 ಜೂನ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 564 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,866 ಕ್ಕೆ ತಲುಪಿದೆ.

ಈ ಅವಧಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರಲ್ಲಿ 3 ಮಂದಿ ಮಹಾರಾಷ್ಟ್ರದವರು, ದೆಹಲಿ ಮತ್ತು ಕರ್ನಾಟಕದಿಂದ ತಲಾ 2 ಜನರಿದ್ದಾರೆ. ಮೃತರಲ್ಲಿ ಹೆಚ್ಚಿನವರು ವೃದ್ಧರಾಗಿದ್ದು, ಮಧುಮೇಹ, ರಕ್ತದೊತ್ತಡ ಹಾಗೂ ನ್ಯುಮೋನಿಯಾದಂತಹ ಹಿನ್ನಲೆ ಕಾಯಿಲೆಗಳಿಂದ ಬಳಲುತ್ತಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande