ಡಬ್ಲಿನ್, 05 ಜೂನ್ (ಹಿ.ಸ.) :
ಆ್ಯಂಕರ್ : ಗಾಜಾ ಯುದ್ಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಮಣಿದು, ಐರ್ಲೆಂಡ್‌ನ ಪ್ರತಿಷ್ಠಿತ ಟ್ರಿನಿಟಿ ಕಾಲೇಜು ಡಬ್ಲಿನ್ ಇಸ್ರೇಲ್‌ನೊಂದಿಗೆ ಎಲ್ಲ ಶೈಕ್ಷಣಿಕ ಮತ್ತು ವ್ಯಾಪಾರ ಸಂಬಂಧ ಕಡಿತಗೊಳಿಸಲು ಬುಧವಾರ ನಿರ್ಧರಿಸಿದೆ.
ವಿಶ್ವವಿದ್ಯಾಲಯ ಮಂಡಳಿ ವಿದ್ಯಾರ್ಥಿಗಳಿಗೆ ಇಮೇಲ್ ಮೂಲಕ ಈ ಮಾಹಿತಿ ನೀಡಿದ್ದು, ಇನ್ನು ಮುಂದೆ ಇಸ್ರೇಲ್ ಮೂಲದ ಕಂಪನಿಗಳಿಂದ ಹೂಡಿಕೆಗಳನ್ನು ಹಿಂತೆಗೆದುಕೊಳ್ಳಲಾಗುವುದು ಹಾಗೂ ಇಸ್ರೇಲಿ ವಿಶ್ವವಿದ್ಯಾಲಯಗಳೊಂದಿಗೆ ಯಾವುದೇ ಹೊಸ ಒಪ್ಪಂದಗಳನ್ನು ಕೈಗೊಂಡು ವಿದ್ಯಾರ್ಥಿ ಮತ್ತು ಅಧ್ಯಾಪಕರ ವಿನಿಮಯ ಕಾರ್ಯಕ್ರಮಗಳನ್ನು ನಡೆಸಲಾಗದು ಎಂದು ತಿಳಿಸಿದೆ.
ವಿದ್ಯಾರ್ಥಿ ಸಂಘಟನೆಗಳು ಈ ನಿರ್ಧಾರವನ್ನು ವಿಜಯವೆಂದು ಬಣ್ಣಿಸಿದ್ದು, ಇಸ್ರೇಲ್ ಪರ ಗುಂಪುಗಳು ಶೈಕ್ಷಣಿಕ ಸ್ವಾತಂತ್ರ್ಯದ ಮೇಲೆ ದಾಳಿ ಎಂದು ಟೀಕಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa