ಬಳ್ಳಾರಿ, 06 ಜೂನ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜೂ.15 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-275751, ಮೊ.8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್