ಮೈಸೂರು, 07 ಜೂನ್ (ಹಿ.ಸ.) :
ಆ್ಯಂಕರ್ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ), ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ : https://uucms.karnataka.gov.in ಅಥವಾ https://www.cavamysore.karnataka.gov.in ಮೂಲಕ ಅರ್ಜಿಗಳನ್ನು ಜೂನ್ 10 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸಹಾಯವಾಣಿ-0821-2438931 ಮೂಲಕ ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa