ಮೈಸೂರು, 07 ಜೂನ್ (ಹಿ.ಸ.) :
ಆ್ಯಂಕರ್ : ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಮೈಸೂರು ಸಂಸ್ಥೆಯ 2025-26 ನೇ ಶೈಕ್ಷಣಿಕ ಸಾಲಿಗೆ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅತಿಥಿ ಉಪನ್ಯಾಸಕ, ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 16, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಜೂನ್ 26, 2025 ರಂದು 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in ಗೆ ಅಥವಾ ಕಾರ್ಯಾಲಯದ ದೂರವಾಣಿ ಸಂಖ್ಯೆ: 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಕಾವಾ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa