ಬೆಂಗಳೂರು, 07 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಇಂದು ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ ನಗರಗಳಲ್ಲಿ ಮುಸ್ಲಿಂ ಬಾಂಧವರು ಶ್ರದ್ಧೆ ಭಕ್ತಿಯಿಂದ ಆಚರಿಸಿದರು.
ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೆ ಸಹೋದರರಂತೆ ಬಾಳುವಂತೆ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa