ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ರಾಯಚೂರು, 07 ಜೂನ್ (ಹಿ.ಸ.) : ಆ್ಯಂಕರ್ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ,
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ


ರಾಯಚೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಮತ್ತು ಹೊಲಿಗೆ ಯಂತ್ರ ವಿತರಣೆ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತವೆ.

ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾ0ಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08532-250440 ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾ0ಶದ ಮುಖಾಂತರ ಅರ್ಜಿ ಸಲ್ಲಿಸಲು ದಿನಾಂಕ 30.06.2025ರಂದು ಕೊನೆಯ ದಿನಾಂಕ ನಿಗದಿಪಡಿಸಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande