ಬೆಂಗಳೂರು, 07 ಜೂನ್ (ಹಿ.ಸ.):
ಆ್ಯಂಕರ್ : ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ.
ಈ ಮಧ್ಯೆ, ಜೂನ್ 4ರಂದು ಆರ್ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಂಭವಿಸಿದ ಸಾವು ಹಾಗೂ ಗಾಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಜೂನ್ 5ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa