ವಿಶ್ವ ಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿಗಳ ಆಹ್ವಾನ
ಗದಗ, 07 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು- ಶೈಕ್ಷಣಿಕ ನೇರಸಾಲ ಯೋಜನೆ ಹೊಸದು,ಅರಿವು - ಶೈಕ್ಷಣಿಕ ನೇರಸಾಲ ಯೋಜನೆ ನವೀಕರಣ, ಗಂಗಾ ಕಲ್ಯಾ
ಪೋಟೋ


ಗದಗ, 07 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು- ಶೈಕ್ಷಣಿಕ ನೇರಸಾಲ ಯೋಜನೆ ಹೊಸದು,ಅರಿವು - ಶೈಕ್ಷಣಿಕ ನೇರಸಾಲ ಯೋಜನೆ ನವೀಕರಣ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2 ಆಗಿರುತ್ತದೆ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ, ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50, ಲಕ್ಷಗಳು.ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.

ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.

2023-24 ಹಾಗೂ 2024-25ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್, ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039 ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿ ಸಂ: 08372-232327 ನ್ನು ಪೂರ್ವಾಹ್ನ 10.00ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande