ಹಾನಗಲ್, 07 ಜೂನ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಿಂದ ₹ 60 ಲಕ್ಷ ವೆಚ್ಚದಲ್ಲಿ ಪಿಡಬ್ಲ್ಯೂಡಿ ರಸ್ತೆಯಿಂದ ಕಾಮನಹಳ್ಳಿ ಕೂಡು ರಸ್ತೆ ಅಭಿವೃದ್ಧಿ ಹಾಗೂ ಎರಡೂ ಬದಿ ಪಕ್ಕಾ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಸಂಪರ್ಕ ರಸ್ತೆಗಳ ಅಭಿವೃದ್ಧಿಯಿಂದ ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹಾಗಾಗಿ ರಸ್ತೆಗಳ ಅಭಿವೃದ್ಧಿ ಹಾಗೂ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa