ಬೆಂಗಳೂರು, 07 ಜೂನ್ (ಹಿ.ಸ.) :
ಆ್ಯಂಕರ್ : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದು ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿಮ್ಹಾನ್ಸ್‌ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಇಲಾಖೆಯ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರ ಸಮ್ಮುಖದಲ್ಲಿ ಭಾಷಣ ಮಾಡಿದ ಸಚಿವ ಡಾ. ಪಾಟೀಲ್, ಅನೈರ್ಮಲ್ಯ ಮತ್ತು ಕಲಬೆರಕೆ ಆಹಾರದಿಂದ ಉಂಟಾಗುವ ಗಂಭೀರ ಆರೋಗ್ಯ ಅಪಾಯಗಳನ್ನು ತಡೆಗಟ್ಟಬೇಕಾಗಿದೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟವಾಗುವ ಕಡಿಮೆ ಗುಣಮಟ್ಟದ ಆಹಾರದಿಂದ ಮಕ್ಕಳು ಮತ್ತು ವೃದ್ಧರ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಸಂಸ್ಥೆಗಳಿಂದ ಕಟ್ಟುನಿಟ್ಟಿನ ಜಾರಿ ಅತ್ಯಗತ್ಯ ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa