ರಾಯಪುರ್, 07 ಜೂನ್ (ಹಿ.ಸ.) :
ಆ್ಯಂಕರ್ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ದಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಭದ್ರತಾ ಪಡೆಗಳು ಇಬ್ಬರು ನಕ್ಸಲರನ್ನು ಹತ್ಯೆ ಮಾಡಿ, ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಈ ಕಾರ್ಯಾಚರಣೆ 30 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ. ಗುರುವಾರ, ಕೆಂಡ್ರೀಯ ಸಮಿತಿ ಸದಸ್ಯ ಸುಧಾಕರ್ , ಶುಕ್ರವಾರ ತೆಲಂಗಾಣ ರಾಜ್ಯ ಸಮಿತಿ ಸದಸ್ಯ ಭಾಸ್ಕರ್ ಮೃತಪಟ್ಟಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa