ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಯುವ ಕಾಂಗ್ರೆಸ್ ಮತ್ತು ಕುವೆಂಪುನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೋಡಿಗೆಹಳ್ಳಿಯಲ್ಲಿ ಉಚಿತ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ 300ಕ್ಕಿಂತ ಹೆಚ್ಚು ಫಲಾನುಭವಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು. ಉಚಿತ ಕನ್ನಡಕ ವಿತರಣೆಯ ಜೊತೆಗೆ ಪೊರೆಗೆಟ್ಟಿದವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa