ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿ ವಿಸ್ತರಣೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿ ವಿಸ್ತರಣೆ
ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ


ಕೋಲಾರ, ಜೂನ್ ೦೮, (ಹಿ.ಸ):

ಆ್ಯಂಕರ್ : ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ. ಸಮೀಕ್ಷೆಯ ಅವಧಿಯನ್ನು ಜೂನ್ ೨೨ರತನಕ ವಿಸ್ತರಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ೧೦೧ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪೈನಾನ್ಸಿಯಲ್ ಡಾಟಾ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು, ಸದರಿ ಆಯೋಗವು, ೨೦೨೫ನೇ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ೨೦೨೫ ನೇ ಏಪ್ರಿಲ್ ೦೫ ರಿಂದ ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ - ೨೦೨೫ ರನ್ನು ೨೦೨೫ ನೇ ಜೂನ್ ೦೮ ರವರೆಗೆ ವಿಶೇಷ ಶಿಬಿರಗಳು ಹಾಗೂ ಆನ್‌ಲೈನ್ ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡAತೆ ಒಟ್ಟು ೨ ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಎಂದು ತಿಳಿಸಿದ್ದಾರೆ.

ಈಗಾಗಲೇ ೨೦೨೫ನೇ ಜೂನ್ ೦೬ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.೯೦.೦೦ ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ. ಉಳಿದಂತೆ ಸುಮಾರು ಶೇ. ೧೦ ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿರುತ್ತದೆ.

ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು ೨೦೨೫ ಜೂನ್ ರಿಂದ ರಾಜ್ಯದಲ್ಲಿನ ಒಟ್ಟು ೯೪೦೦ ನಾಗರೀಕ ಸೇವಾ ಕೇಂದ್ರಗಳಾದ, ಕರ್ನಾಟಕ ಒನ್ 'ಬೆಂಗಳೂರು ಒನ್ ಹಾಗೂ ೧೯೮ ಬಿ.ಬಿ.ಎಂ. ಪಿ ವಾರ್ಡ್ ಕಚೇರಿ ಗಳಿಗೆ ಭೇಟಿ ನೀಡಿ ೨೦೨೫ನೇ ಜೂನ್ ೨೨ ರವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ.

ಮುಂದುವರೆದು, ಆನ್‌ಲೈನ್ ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು hಣಣಠಿs://sಛಿheಜuಟeಛಿಚಿsಣesuಡಿveಥಿ.ಞಚಿಡಿಟಿಚಿಣಚಿಞಚಿ.gov.iಟಿ/seಟಜಿಜeಛಿಟಚಿಡಿಚಿಣioಟಿ ಲಿಂಕ್ ಮೂಲಕ ೨೦೨೫ನೇ ಜೂನ್ ೨೨ ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಹಕರಿಸಲು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರ : ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande