ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 12ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಇತರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ವಿಜಯಪುರ, ದಾವಣಗೆರೆ, ಕೊಡಗು, ಬೆಂಗಳೂರು ನಗರ-ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿದಂತೆ ಒಟ್ಟು 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa