ಜೈಶಂಕರ್ ಯುರೋಪ್ ಪ್ರವಾಸ
ನವದೆಹಲಿ, 08 ಜೂನ್ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಜೂನ್ 8 ರಿಂದ 14ರವರೆಗೆ ಫ್ರಾನ್ಸ್, ಯುರೋಪಿಯನ್ ಒಕ್ಕೂಟ ಮತ್ತು ಬೆಲ್ಜಿಯಂಗೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಈ ಪ್ರವಾಸದ ಉದ್ದೇಶ ಮೂರು ಪ್ರಮುಖ ಪಾಲುದಾರ ರಾಷ್ಟ್ರಗಳೊಂದಿಗೆ ಕಾರ್ಯತಂತ್ರದ ಸಹಕಾರ ಬಲಪಡಿಸುವುದಾಗ
Jai shankar


ನವದೆಹಲಿ, 08 ಜೂನ್ (ಹಿ.ಸ.) :

ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಜೂನ್ 8 ರಿಂದ 14ರವರೆಗೆ ಫ್ರಾನ್ಸ್, ಯುರೋಪಿಯನ್ ಒಕ್ಕೂಟ ಮತ್ತು ಬೆಲ್ಜಿಯಂಗೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಈ ಪ್ರವಾಸದ ಉದ್ದೇಶ ಮೂರು ಪ್ರಮುಖ ಪಾಲುದಾರ ರಾಷ್ಟ್ರಗಳೊಂದಿಗೆ ಕಾರ್ಯತಂತ್ರದ ಸಹಕಾರ ಬಲಪಡಿಸುವುದಾಗಿದೆ.

ಫ್ರಾನ್ಸ್‌ನಲ್ಲಿ ಅವರು ಪ್ಯಾರಿಸ್ ಮತ್ತು ಮಾರ್ಸಿಲ್ಲೆ ನಗರಗಳಿಗೆ ಭೇಟಿ ನೀಡಿ, ಫ್ರಾನ್ಸ್ ವಿದೇಶಾಂಗ ಸಚಿವ ಜೀನ್ ನೋಯೆಲ್ ಬ್ಯಾರಟ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಮಾರ್ಸಿಲ್ಲೆಯಲ್ಲಿ ನಡೆಯುವ ಸಚಿವ ಮಟ್ಟದ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ.

ಬ್ರಸೆಲ್ಸ್‌ನಲ್ಲಿ ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿ ಕಾಜಾ ಕಲ್ಲಾಸ್, ಆಯೋಗದ ಅಧಿಕಾರಿಗಳು ಮತ್ತು ಸಂಸತ್ ಸದಸ್ಯರನ್ನು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ.

ಬೆಲ್ಜಿಯಂನಲ್ಲಿ ಉಪ ಪ್ರಧಾನ ಮಂತ್ರಿ ಹಾಗೂ ವಿದೇಶಾಂಗ ಸಚಿವ ಮ್ಯಾಕ್ಸಿಮ್ ಪ್ರೆವೋಟ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿ, ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿಯಾಗಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande