ಕಲಬುರಗಿ, 09 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಈ ಕೆಳಕಂಡ ನಾನಾ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಹ ಫಲಾನುಭವಿಗಳು ಕಲಬುರಗಿ-ಒನ್/ಕರ್ನಾಟಕ-ಒನ್/ಅಟಲ್-ಜಿಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಯನ್ನು www.kaushalkar.com ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2025ರ ಜುಲೈ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ https://kvcdcl.karnataka.gov.in ವೆಬ್ಸೈಟ್ನ್ನು ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/ 7899899039 ಗಳಿಗೆ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, 2ನೇ ಮಹಡಿ, ಸಿಟಿ ಸ್ಕ್ವೆರ್ ಬೀಲ್ಡಿಂಗ್, ಬಡೇಪೂರ 3ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಕಲಬುರಗಿ-585105 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಲು ಕೋರಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Samarth biral