ಮಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ವತಿಯಿಂದ ಹಿಂದೂ ಕಾರ್ಯಕರ್ತರ ಬಂಧನ, ಸುಳ್ಳು ಪ್ರಕರಣ ದಾಖಲು ಮತ್ತು ಗಡಿಪಾರು ಆದೇಶದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಾಹಿತಿ ಸಂಗ್ರಹ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ. ವಿ. ಸದಾನಂದ ಗೌಡ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa