ಭಾಲ್ಕಿ, 09 ಜೂನ್ (ಹಿ.ಸ.) :
ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ವಲಯದ ವತಿಯಿಂದ ನಡೆದ ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು, ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿ ನೆಟ್ಟು, ಅದರ ಪೋಷಣೆ ಮಾಡುವ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕು. ಹಸಿರು ಕರ್ನಾಟಕದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ನಾವೆಲ್ಲಾ ಸೇರಿ ಪರಿಸರದ ರಕ್ಷಣೆಗೆ ಬದ್ಧರಾಗೋಣ ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa