ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ
ಕಲಬುರಗಿ, 09 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಇದೇ ಜೂನ್ 16 ರಿಂದ ಜುಲೈ 16 ರವರೆಗೆ 31 ದಿನಗಳ ಕಾಲ ಉಚಿತವಾಗಿ ಹೊಲಿಗೆ (ಮಹಿಳೆಯರಿಗಾಗಿ) ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್
ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ


ಕಲಬುರಗಿ, 09 ಜೂನ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಇದೇ ಜೂನ್ 16 ರಿಂದ ಜುಲೈ 16 ರವರೆಗೆ 31 ದಿನಗಳ ಕಾಲ ಉಚಿತವಾಗಿ ಹೊಲಿಗೆ (ಮಹಿಳೆಯರಿಗಾಗಿ) ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2025ರ ಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಜೂನ್ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande