ಮಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಹಿಂದೂ ಕಾರ್ಯಕರ್ತರ ಬಂಧನ, ಸುಳ್ಳು ಪ್ರಕರಣ ದಾಖಲು ಮತ್ತು ಗಡಿಪಾರು ಆದೇಶ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ನಿಯೋಗದೊಂದಿಗೆ ತೆರಳಿ ಮಾಹಿತಿ ಸಂಗ್ರಹ ಸಭೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಪ್ರಭಾವಿಗಳ ತಾಳಕ್ಕೆ ತಕ್ಕಂತೆ ಪೊಲೀಸರು ಕುಣಿದರೆ, ಅದರ ಪ್ರತಿಫಲವನ್ನು ಅನುಭವಿಸಬೇಕಾಗುತ್ತದೆ. ಈಗಾಗಲೇ ಬೆಂಗಳೂರಿನ ದುರ್ಘಟನೆ ಪೊಲೀಸರಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದರು.
ನ್ಯಾಯೋಚಿತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿ, ನಮ್ಮ ಹಿಂದೂ ಕಾರ್ಯಕರ್ತರ ನೈತಿಕ ಬಲ ಕುಗ್ಗಿಸಲು ಯತ್ನಿಸಿದರೆ ಪರಿಣಾಮ ಎದುರಿಸಲು ಸರ್ಕಾರ ಸಿದ್ಧವಾಗಲಿ. ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು, ದೇಶವಿದ್ರೋಹಿ ಶಕ್ತಿಗಳ ಕೋಮು ಅಟ್ಟಹಾಸ ನಿಲ್ಲಬೇಕು ಎಂಬುದು ನನ್ನ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ದುಷ್ಟ ಜನರ ರಕ್ಷಣೆ, ಶಿಷ್ಟರನ್ನು ಕೆರಳಿಸಿದರೆ ಅದರ ವಿರುದ್ಧ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಹೋರಾಡಲಿದೆ ಎಂದು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa