ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ಸಭೆ ನಡೆಸಿ, ಚರ್ಚಿಸಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಎಸ್.ಮುರುಗನ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa