ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
''ಸಿದ್ದರಾಮಯ್ಯನವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನ ಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ವಿಧಾನ ಸೌಧದ ಮೆಟ್ಟಿಲು ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ!, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಟೀಕಿಸಿದ್ದಾರೆ.
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa