ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
ಗದಗ, 09 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮು ಅವಧಿಗೆ ಸರ್ಕಾರದ ಕೃಷಿ ಇಲಾಖೆಯ ಅಧಿಸೂಚನೆಯಂತೆ ಗದಗ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚ
ಪೋಟೋ


ಗದಗ, 09 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮು ಅವಧಿಗೆ ಸರ್ಕಾರದ ಕೃಷಿ ಇಲಾಖೆಯ ಅಧಿಸೂಚನೆಯಂತೆ ಗದಗ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ.

ನೀರಾವರಿ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ದಿನಾಂಕ 31-07-2025ರಂದು ಕೊನೆಯ ದಿನವಾಗಿರುತ್ತದೆ. ಮಳೆಯಾಶ್ರಿತ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ದಿನಾಂಕ 16-08-2025ರಂದು ಕೊನೆಯ ದಿನವಾಗಿದೆ.

ಆಸಕ್ತ ರೈತರು ವಿಮೆಗೆ ನೋಂದಾಯಿಸಿಕೊಳ್ಳಲು ಅರ್ಜಿ ಪತ್ರ, ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ ಹಾಗೂ ಸ್ವಯಂ ಘೋಷಿತ ಬೆಳೆ ದೃಢೀಕರಣ ಪತ್ರದೊಂದಿಗೆ ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಗದಗ ಯಾ ತಾಲೂಕಿನ ತೋಟಗಾರಿಕೆ ಇಲಾಖೆ , ಕೃಷಿ ಇಲಾಖೆ ಕಛೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande