ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಮುನ್ಸೂಚನೆ
ಬೆಂಗಳೂರು, 09 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13ರ ನಂತರ ಭಾರಿ ಮಳೆಯ ಸಾಧ್ಯತೆ ಇರುವ ಕಾರಣ ಹಳದಿ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದ. ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್,
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಮುನ್ಸೂಚನೆ


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13ರ ನಂತರ ಭಾರಿ ಮಳೆಯ ಸಾಧ್ಯತೆ ಇರುವ ಕಾರಣ ಹಳದಿ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ದ. ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಬುಧವಾರದಿಂದ ಮಳೆ ಜೋರಾಗಲಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಸೇರಿದಂತೆ ಮಧ್ಯ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande