ನವದೆಹಲಿ, 09 ಜೂನ್ (ಹಿ.ಸ.) :
ಆ್ಯಂಕರ್ : ಎನ್ ಡಿಎ ಸರ್ಕಾರದ 11 ವರ್ಷಗಳ ಸಾಧನೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತವು ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ತ್ವರಿತ ಪರಿವರ್ತನೆ ಕಂಡಿದೆ ಎಂದು ಮೋದಿ ಹೇಳಿದ್ದಾರೆ. ಉಜ್ವಲ ಯೋಜನೆ, ಆವಾಸ್ ಯೋಜನೆ, ಆಯುಷ್ಮಾನ್ ಭಾರತ, ಜನ ಔಷಧಿ ಮತ್ತು ಪಿಎಂ ಕಿಸಾನ್ ಯೋಜನೆಗಳು ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸಿವೆ. 'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್' ತತ್ವದ ಮೂಲಕ ಎನ್‌ಡಿಎ ಸರ್ಕಾರವು ಜನಕೇಂದ್ರಿತ, ಅಂತರಾಳ ಪ್ರವೇಶದ ಹಾಗೂ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa