ಕಾಲ್ತುಳಿತ ಪ್ರಕರಣ : ಅಮಾನತು ಕ್ರಮ ಪ್ರಶ್ನಿಸಿ ಸಿಎಟಿ ಗೆ ಐಪಿಎಸ್ ಅಧಿಕಾರಿ ಮೊರೆ
ಬೆಂಗಳೂರು, 09 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಕರ್ತವ್ಯ ಲೋಪಕ್ಕೆ ಕಾರಣವೆಂದು ಆರೋಪಿಸಿ ರಾಜ್ಯ ಸರ್ಕಾರ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ
ಕಾಲ್ತುಳಿತ ಪ್ರಕರಣ : ಅಮಾನತು ಕ್ರಮ ಪ್ರಶ್ನಿಸಿ ಸಿಎಟಿ ಗೆ ಐಪಿಎಸ್ ಅಧಿಕಾರಿ ಮೊರೆ


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಕರ್ತವ್ಯ ಲೋಪಕ್ಕೆ ಕಾರಣವೆಂದು ಆರೋಪಿಸಿ ರಾಜ್ಯ ಸರ್ಕಾರ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.

ಜೂನ್ 5ರ ರಾತ್ರಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಎಚ್‌.ಟಿ. ಶೇಖರ್, ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್ ಎ.ಕೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಅಮಾನತು ಆದೇಶದ ಹಿನ್ನೆಲೆಯಲ್ಲಿ ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅವರು ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ ಮೊರೆ ಹೋಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande