ಬಾಲಕಾರ್ಮಿಕ ತಡೆಗೆ ಟಾಸ್ಕ್‌ಫೋರ್ಸ್ ಸಭೆ ಕಡ್ಡಾಯ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ, 09 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಬಾಲಕಾರ್ಮಿಕರ ತಡೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ತಹಶಿಲ್ದಾರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್
Child act


ಧಾರವಾಡ, 09 ಜೂನ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಬಾಲಕಾರ್ಮಿಕರ ತಡೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ತಹಶಿಲ್ದಾರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಬಾಲ ಮತ್ತು ಕಿಶೋರ ಕಾರ್ಮಿಕರ ಪತ್ತೆ, ರಕ್ಷಣಾ ಕ್ರಮಗಳು, ಪುನರ್ವಸತಿ ಕಾರ್ಯಗಳಲ್ಲಿ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯವಿದೆ ಎಂದರು.

ಕಾರ್ಮಿಕ ಇಲಾಖೆ ಅಧಿಕಾರಿಗಳು ಶಾಲೆಗೆ ಗೈರಾಗಿರುವ ಮಕ್ಕಳ ಮಾಹಿತಿ ಪಡೆದು ಅವರ ಮನೆಗಳಿಗೆ ಭೇಟಿ ನೀಡಿ, ಸಮೀಕ್ಷಾ ವರದಿ ನೀಡಬೇಕೆಂದು ಹೇಳಿದರು. ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅವರು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande