ಗದಗ, 01 ಜುಲೈ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಜುಲೈ 5 ರಿಂದ 12 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 3 ಪರೀಕ್ಷೆಗಳು ಜರುಗಲಿದ್ದು ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ -3 ಕುರಿತು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಗಳಲ್ಲಿ ಯಾವುದೇ ನಕಲು, ಅವ್ಯವಹಾರ , ಅಕ್ರಮ ನಡೆಯದಂತೆ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನದ ವ್ಯವಸ್ಥೆ , ಕುಡಿಯುವ ನೀರಿನ ವ್ಯವಸ್ಥೆ , ವಿದ್ಯುತ್ ಸರಬರಾಜು ಸೇರಿದಂತೆ ಮೂಲಭೂತ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಪರೀಕ್ಷಾ ಸಮಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸಂಬಂಧಿತ ಅಧಿಕಾರಿಗಳು ನಿಗಾ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್‌ಎಸ್ ಬುರುಡಿ ಅವರು ಮಾತನಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆ 3, ಪರೀಕ್ಷೆಗಳು ಜುಲೈ 5 ರಿಂದ 12 ರವರೆಗೆ ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು ಒಟ್ಟು 3528 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಜರಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಪರೀಕ್ಷಾ ಕೇಂದ್ರಗಳ ವಿವರ: ಗದಗನ ವಿಡಿಎಸ್‌ಟಿ ಬಾಲಕಿಯರ ಸಂಯುಕ್ತ ಪ.ಪೂ.ಕಾಲೇಜು: ಗದಗ ಬಸವೇಶ್ವರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ: ಗದಗ ವಿಡಿಎಸ್‌ಟಿ ಬಾಲಕರ ಸಂಯುಕ್ತ ಪದವಿ ಪೂರ್ವ ಕಾಲೇಜು: ಮುಳಗುಂದದ ಎಸ್‌ಜೆಜೆಎಮ್. ಪದವಿ ಪೂರ್ವ ಕಾಲೇಜು; ಕಳಸಾಪೂರದ ಬ್ರೆöÊಟ್ ಹಾರಿಝೋನ್ ಪ್ರೌಢಶಾಲೆ, ಮುಂಡರಗಿಯ ಜೆ.ಅ.ಪ್ರೌಢಶಾಲೆ, ಮುಂಡರಗಿಯ ವಿ.ಜಿ.ಲಿಂಬಿಕಾಯಿ ಪ್ರೌಢಶಾಲೆ, ನರಗುಂದದ ನವೋದಯ ಪ್ರೌಢಶಾಲೆ, ರೋಣದ ವಿ.ಎಫ್.ಪಾಟೀಲ ಎಸ್.ಎಸ್.; ಗಜೇಂದ್ರಗಡದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ; ಲಕ್ಷ್ಮೇಶ್ವರ ಉಮಾವಿದ್ಯಾಲಯ ಮುನ್ಸಿಪಲ್ ಪ್ರೌಢಶಾಲೆ , ಶಿರಹಟ್ಟಿಯ ಎಫ್.ಎಮ್.ಡಬಾಲಿ ಸಂಯುಕ್ತ ಪದವಿ ಪೂರ್ವ ಕಾಲೇಜು.
ಹಿಂದೂಸ್ತಾನ್ ಸಮಾಚಾರ್ / Lalita MP