ಪಂಚಾಯತ್‌ರಾಜ್ ಪರಿಶಿಷ್ಟ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಪಂಚಾಯತ್‌ರಾಜ್ ಪರಿಶಿಷ್ಟ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘಕ್ಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಕರಿಬಸಪ್ಪ ಹಾಗೂ ಕೋಲಾರ ಜಿಲ್ಲಾಧ್ಯಕ್ಷರನ್ನಾಗಿ ಪಿಡಿಒ ಕೆ.ವಿ.ವೆಂಕಟಾಚಲಪತಿ ನೇಮಕಗೊಂಡಿದ್ದಾರೆ.


ಕೋಲಾರ,೦೧ ಜುಲೈ (ಹಿ.ಸ) :

ಆ್ಯಂಕರ್ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತುಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘಕ್ಕೆ ಕೋಲಾರ ಜಿಲ್ಲಾಧ್ಯಕ್ಷರನ್ನಾಗಿ ಮುಳಬಾಗಿಲು ತಾಲ್ಲೂಕಿನ ಪಿಡಿಒ ಕೆ.ವಿ.ವೆಂಕಟಾಚಲಪತಿ ಅವರನ್ನು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ತಾಲ್ಲೂಕು ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್-೧ ಎಂ.ಟಿ.ಕರಿಬಸಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಸಂಘದ ರಾಜ್ಯಾಧ್ಯಕ್ಷ ಎಂ.ಸುರೇಶ್ ಕುಮಾರ್ ಈ ಆದೇಶ ಹೊರಡಿಸಿದ್ದು, ಇಂದಿನಿ0ದ ಜಾರಿಗೆ ಬರುವಂತೆ ವೆಂಕಟಾಚಲಪತಿ ಸಂಘದ ಅಧ್ಯಕ್ಷರಾಗಿ ಹಾಗೂ ಕರಿಬಸಪ್ಪ ಅವರು ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತುಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘದ ಸಂಘಟನೆಯನ್ನು ಬಲಗೊಳಿಸಿ, ಸಮುದಾಯದ ನೌಕರರಿಗೆ ಸದಸ್ಯತ್ವ ನೀಡಿ, ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಚಿತ್ರ ; ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘಕ್ಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಕರಿಬಸಪ್ಪ ಹಾಗೂ ಕೋಲಾರ ಜಿಲ್ಲಾಧ್ಯಕ್ಷರನ್ನಾಗಿ ಪಿಡಿಒ ಕೆ.ವಿ.ವೆಂಕಟಾಚಲಪತಿ ನೇಮಕಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande